ವಿಷಯಕ್ಕೆ ಹೋಗು

ಬ್ರಹ್ಮವ ನುಡಿದಾನು ಭ್ರಮಿತನಾದೆನಯ್ಯಾ,

ವಿಕಿಸೋರ್ಸ್ದಿಂದ


ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಬ್ರಹ್ಮವ ನುಡಿದಾನು ಭ್ರಮಿತನಾದೆನಯ್ಯಾ
ಅದ್ವೈತವ ನುಡಿದಾನು ಅಹಂಕಾರಿಯಾದೆನಯ್ಯಾ
ಶೂನ್ಯವ ನುಡಿದಾನು ಸುಖದುಃಖಕ್ಕೆ ಗುರಿಯಾದೆನಯ್ಯಾ
ಸ್ಥಲಗೆಟ್ಟು ನುಡಿದಾನು ಸಂಸಾರಿಯಾದೆನಯ್ಯಾ
ಗುಹೇಶ್ವರಾ
ನಿಮ್ಮ ಶರಣ ಸಂಗನಬಸವಣ್ಣನ ಪ್ರಸಾದವ ಕೊಂಡು ಬದುಕಿದೆನಯ್ಯಾ.