ಭಕ್ತಂಗೆ ಪೃಥ್ವಿಯೆ ಅಂಗ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭಕ್ತಂಗೆ ಪೃಥ್ವಿಯೆ ಅಂಗ
ಆ ಅಂಗಕ್ಕೆ ಸುಚಿತ್ತವೆ ಹಸ್ತ
ಆ ಹಸ್ತಕ್ಕೆ ಕರ್ಮಸಾದಾಖ್ಯ
ಆ ಸಾದಾಖ್ಯಕ್ಕೆ ಕ್ರಿಯಾಶಕ್ತಿ
ಆ ಶಕ್ತಿಗೆ ಆಚಾರವೆ ಲಿಂಗ
ಆ ಲಿಂಗಕ್ಕೆ ನಿವೃತ್ತಿಯೆ ಕಲೆ
ಆ ಕಲೆಗೆ ಘ್ರಾಣೇಂದ್ರಿಯವೆ ಮುಖ
ಆ ಮುಖಕ್ಕೆ ಸುಪರಿಮಳದ್ರವ್ಯಂಗಳನು ರುಚಿತೃಪ್ತಿಯನರಿದು ಸದ್ಭಕ್ತಿಯಿಂದರ್ಪಿಸಿ ಸುಗಂಧಪ್ರಸಾದವ ಭೋಗಿಸಿ ಸುಖಿಸುತ್ತಿಹನು ಕೂಡಲಚೆನ್ನಸಂಗಾ ನಿಮ್ಮ ಭಕ್ತನು