ಭಕ್ತನಾದರೆ ಭಕ್ತಿಸ್ಥಲವನರಿದು ಅರಿಯದಂತಿರಬೇಕು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭಕ್ತನಾದರೆ ಭಕ್ತಿಸ್ಥಲವನರಿದು ಅರಿಯದಂತಿರಬೇಕು
ಮಹಾಹೇಶ್ವರನಾದರೆ ನಿಷೆ*ಯ ಕುಳವನರಿದು ಅರಿಯದಂತಿರಬೇಕು
ಪ್ರಸಾದಿಯಾದರೆ ಪ್ರಸಾದಿಸ್ಥಲವನರಿದು ಅರಿಯದಂತಿರಬೇಕು
ಪ್ರಾಣಲಿಂಗಿಯಾದರೆ ಸ್ಥಿತಿ-ಗತಿಯನರಿದು ಅರಿಯದಂತಿರಬೇಕು
ಶರಣನಾದರೆ ಸತಿಪತಿಯೆಂದರಿದು ಅರಿಯದಂತಿರಬೇಕು
ಐಕ್ಯನಾದರೆ ತಾನು ತಾನಾಗಿ ಆಗದಂತಿರಬೇಕು
_ ಇಂತೀ ಷಡುಸ್ಥಲವನರಿಯದೆ ಮಾಡಿದೆನೆಂಬ ಲಜ್ಜೆಗೆಟ್ಟ ಲಾಂಛನಧಾರಿಯನೇನೆಂಬೆ
ಕೂಡಲಚೆನ್ನಸಂಗಮದೇವಾ.