ಭಕ್ತನ ಕಾಯವ ಜಂಗಮ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತನ ಕಾಯವ ಜಂಗಮ ಧರಿಸಿಪ್ಪ ನೋಡಾ
ಜಂಗಮದ ಪ್ರಾಣವ ಭಕ್ತ ಧರಿಸಿಪ್ಪ ನೋಡಾ. ಭಕ್ತನಲ್ಲಿಯೂ ಭಕ್ತಜಂಗಮವೆರಡೂ ಸನ್ನಹಿತ
ಜಂಗಮದಲ್ಲಿಯೂ ಜಂಗಮಭಕ್ತವೆರಡೂ ಸನ್ನಹಿತ
ಜಂಗಮಕ್ಕಾದಡೂ ಭಕ್ತಿಯೆ ಬೇಕು
ಭಕ್ತಂಗೆ ಭಕ್ತಿಸ್ಥಲವೆ ಬೇಕು. ಭಕ್ತನ ಅರ್ಥಪ್ರಾಣಾಬ್ಥಿಮಾನಕ್ಕೆ ತಾನೆ ಕಾರಣನೆಂದು ಬಂದ ಜಂಗಮ ಆ ಭಕ್ತನ ಮನೆಗೆ ತಾನೆ ಕರ್ತನಾಗಿ ಹೊಕ್ಕು
ತನುಮನಧನಂಗಳೆಲ್ಲವನೊಳಕೊಂಡು
ಆ ಭಕ್ತನ ಪಾವನವ ಮಾಡಬಲ್ಲಡೆ ಆತ ಜಂಗಮವೆಂಬೆ. ಆ ಜಂಗಮದ ಗಳಗರ್ಜನೆಗೆ ಸೈರಿಸಿ
ಮುಡುಹಿಂಗ ಮುನ್ನೂರು ಪಟ್ಟವ ಕಟ್ಟಿದಡೆ ಆತ ಭಕ್ತನೆಂಬೆ. ತನ್ನ ಮಠಕ್ಕೆ ತಾ ಬಹಡೆ ಮುನಿಸುಂಟೆ ಕೂಡಲಸಂಗನ ಶರಣರ ಮನೆಯ ಬಾಗಿಲುಗಾಹಿ ನಾನಾಗಿರ್ದು ಕರ್ತರು ಗೃಹಕ್ಕೆ ಬಂದಡೆ ಬೇಕು ಬೇಡೆನ್ನೆ.