ಭಕ್ತರೆಲ್ಲರೂ ಲಂದಣಿಗರಾಗಿ ಹೋಯಿತ್ತು.

ವಿಕಿಸೋರ್ಸ್ದಿಂದ



Pages   (key to Page Status)   


ಭಕ್ತರೆಲ್ಲರೂ ಲಂದಣಿಗರಾಗಿ ಹೋಯಿತ್ತು. ಜಂಗಮಗಳೆಲ್ಲರೂ (ಜಂಗಮವೆಲ್ಲ?) ಉಪಜೀವಿಗಳಾಗಿ
ಹೋದರು (ಹೋಯಿತ್ತು?). ಇದೇನೊ? ಇದೆಂತೊ? ಅರಿಯಲೆ ಬಾರದು. ಕಾಯಗುಣ ನಾಸ್ತಿಯಾದಾತ ಭಕ್ತ
ಪ್ರಾಣಗುಣ ನಾಸ್ತಿಯಾದಾತ ಜಂಗಮ
ಉಳಿದವೆಲ್ಲವ ಸಟೆಯೆಂಬೆ ಗುಹೇಶ್ವರಾ