ಭಕ್ತರ ಕಂಡಡೆ ಬೋಳರಪ್ಪಿರಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತರ ಕಂಡಡೆ ಬೋಳರಪ್ಪಿರಯ್ಯಾ
ಸವಣರ ಕಂಡಡೆ ಬತ್ತಲೆಯಪ್ಪಿರಯ್ಯಾ
ಹಾರುವರ ಕಂಡಡೆ ಹರಿನಾಮವೆಂಬಿರಯ್ಯಾ
ಅವರವರ ಕಂಡಡೆ ಅವರವರಂತೆ ಸೂಳೆಗೆ ಹುಟ್ಟಿದವರ ತೋರದಿರಯ್ಯಾ. ಕೂಡಲಸಂಗಯ್ಯನ ಪೂಜಿಸಿ
ಅನ್ಯದೈವಂಗಳಿಗೆರಗಿ ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯಾ. 103