Library-logo-blue-outline.png
View-refresh.svg
Transclusion_Status_Detection_Tool

ಭಕ್ತಿಭಾವದ ಭಜನೆ ಎಂತಿದ್ದುದಂತೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಭಕ್ತಿಭಾವದ ಭಜನೆ ಎಂತಿದ್ದುದಂತೆ ಅಂತರಂಗದಲ್ಲಿ ಅರಿವು
ಆ ಅಂತರಂಗದಲ್ಲಿ ಅರಿವಿಂಗೆ ಆಚಾರವೆ ಕಾಯ
ಆ ಆಚಾರಕಾಯವಿಲ್ಲದೆ ಅರಿವಿಂಗಾಶ್ರಯವಿಲ್ಲ. ಅರಿವು ಆಚಾರದಲ್ಲಿ ಸಮವೇಧಿಸಿದ ಲಿಂಗೈಕ್ಯ
ಕ್ರಿಯಾಬದ್ಧನೆಂದು ನುಡಿದಡೆ ಪಂಚಮಹಾಪಾತಕ. ನಿನ್ನ ಅರಿವಿಂಗಚ್ಚಾಗಿ ಆಚಾರಕ್ಕೆ ಆಳಾಗಿ ನಮ್ಮ ಗುಹೇಶ್ವರಲಿಂಗ ನಿನ್ನ ಕೈವಶಕ್ಕೊಳಗಾದನು. ನಿನ್ನ ಸುಖಸಮಾಧಿಯ ತೋರು ಬಾರಾ ಸಿದ್ಧರಾಮಯ್ಯಾ.