ಭಕ್ತಿಯೆಂಬ ಪಿತ್ತ ತಲೆಗೇರಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭಕ್ತಿಯೆಂಬ ಪಿತ್ತ ತಲೆಗೇರಿ ಕೈಲಾಸದ ಬಟ್ಟೆಯ ಹತ್ತುವ ವ್ಯರ್ಥರ ಕಂಡು ಎನ್ನ ಮನ ನಾಚಿತ್ತು
ನಾಚಿತ್ತು. ಕೈಲಾಸವೆಂಬುದೇನೊ
ಪೃಥ್ವಿಯ ಮೇಲೊಂದು ಮೊರಡಿ
ಆ ಪೃಥ್ವಿಗೆ ಲಯವುಂಟು
ಆ ಮೊರಡಿಗೆಯು ಲಯವುಂಟು
ಅಲ್ಲಿರ್ಪ ಗಂಗೆವಾಳುಕಸಮರುದ್ರರಿಗೂ ಲಯವುಂಟು
ಇದು ಕಾರಣ
`ಯದ್ಧೃಷ್ಟಂ ತನ್ನಷ್ಟಂ' ಎಂಬ ಶ್ರುತಿಯ ನೋಡಿ ತಿಳಿದು
ಬಟ್ಟಬಯಲು ತುಟ್ಟತುದಿಯ ಮೆಟ್ಟಿನಿಂದ ಕೂಡಲಸಂಗಾ
ನಿಮ್ಮ ಶರಣ.