ಭಕ್ತಿಹೀನನ ದಾಸೋಹವ ಸದ್ಭಕ್ತರು

ವಿಕಿಸೋರ್ಸ್ದಿಂದ



Pages   (key to Page Status)   

ಭಕ್ತಿಹೀನನ ದಾಸೋಹವ ಸದ್ಭಕ್ತರು ಸವಿಯರು; ಬೇವಿನ ಹಣ್ಣು ಕಾಗೆಗೆ ಇನಿದಲ್ಲದೆ ಕೋಗಿಲೆಗೆ ಮೆಲಬಾರದು. ಲಿಂಗಸಂಬಂಧವಿಲ್ಲದವರ ನುಡಿ ಕೂಡಲಸಂಗನ ಶರಣರಿಗೆ ಸಮನಿಸದು.