ಭಕ್ತ ಜಂಗಮದ ಸಕೀಲಸಂಬಂಧವೆಂತಿಪ್ಪುದೆಂಬುದನಾರು
ಗೋಚರ
ಲೇಖಕರು: ಲೇಖಕರ ಕೃತಿಗಳು
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಈ ಕೃತಿಯ ಪುಟಗಳು
ಭಕ್ತ ಜಂಗಮದ ಸಕೀಲಸಂಬಂಧವೆಂತಿಪ್ಪುದೆಂಬುದನಾರು ಬಲ್ಲರಯ್ಯಾ ? ಅದು ಉಪಮಾತೀತ ! ಭಕ್ತನೊಳಗೆ ಜಂಗಮವಡಗಿದಡೆ ಭಕ್ತನಾಗಿ ಕ್ರಿಯಾನಿಷ್ಪತ್ತಿಯಲ್ಲಿ ಸಮರಸಸುಖಿಯಾಗಿಪ್ಪ ನೋಡಯ್ಯಾ. ಜಂಗಮದೊಳಗೆ ಭಕ್ತನಡಗಿದಡೆ
ಕರ್ತೃಭೃತ್ಯಭಾವವಳಿದು ಸಂಬಂಧ ಸಂಶಯದೋರದೆ
ಅರಿವರತು ಮರಹು ನಷ್ಟವಾಗಿ
ಸ್ವತಂತ್ರ ಶಿವಚಾರಿಯಾಗಿರಬೇಕು ನೋಡಯ್ಯಾ. ಈ ಉಭಯಭಾವಸಂಗದ ಪರಿಣಾಮವ ಕಂಡು ಕೂಡಲಚೆನ್ನಸಂಗಯ್ಯನಲ್ಲಿ ಬಸವಪ್ರಭುದೇವರ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು