ಭಕ್ತ ಭಕ್ತನೆಂದೇನು ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭಕ್ತ ಭಕ್ತನೆಂದೇನು ? ಭವಿಗಳ ಮನೆಯಲುಳ್ಳನ್ನಬರ ಭಕ್ತನೆ ? ಭಕ್ತ ಭಕ್ತನೆಂದೇನು ? ಜಾತಿ ವರ್ಣಾಶ್ರಮ ಕುಲ ಗೋತ್ರ ನಾಮ ಸೀಮೆಯೆಂಬ ಷಡುಭ್ರಮೆ ಕಣ್ಣಲ್ಲಿ ಕವಿದು ಓಲಾಡುವನ್ನಬರ ಭಕ್ತನೆ ? ಭಕ್ತ ಭಕ್ತನೆಂದೇನು ? ಪಂಚಸೂತಕವುಳ್ಳನ್ನಬರ ಭಕ್ತನೆ ? ಭಕ್ತ ಭಕ್ತನೆಂದೇನು ? ತನುವಂಚಕ
ಮನವಂಚಕ ಧನವಂಚಕ ಭಕ್ತನೆ ? ಅಲ್ಲಲ್ಲ ನಿಲ್ಲು ಮಾಣು
_ ಇವರು ಸಾವಿಂಗೆ ಸಂಬಳಗುಂಡನಿರಿದು ಕೊಂಬವರು
ಭಕ್ತರಪ್ಪರೆ ಗುಹೇಶ್ವರಾ ?