ವಿಷಯಕ್ಕೆ ಹೋಗು

ಭಕ್ತ ಭಕ್ತನೆಂಬರು, ಪೃಥ್ವಿಯ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಭಕ್ತ ಭಕ್ತನೆಂಬರು
ಪೃಥ್ವಿಯ ಪೂರ್ವಾಶ್ರಯವ ಕಳೆಯನಲರಿಯಫದನ್ನಕ್ಕ
ಅಪ್ಪುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ
ತೇಜದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ
ವಾಯುವಿನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ
ಆಕಾಶದ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ
ಸೋಮಸೂರ್ಯರ ಕಳೆಗಳ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ
ಆತ್ಮನ ಪೂರ್ವಾಶ್ರಯವ ಕಳೆಯಲರಿಯದನ್ನಕ್ಕ
_ ಭಕ್ತರೆಂದು ಲಿಂಗವ ಪೂಜಿಸುವವರ ಕಂಡು ನಾನು ಬೆರಗಾದೆ ಗುಹೇಶ್ವರಾ.