ಭಕ್ತ ಭಕ್ತನ ಮನೆಗೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಭಕ್ತ ಭಕ್ತನ ಮನೆಗೆ ಬಂದಡೆ
ಭೃತ್ಯಾಚಾರವ ಮಾಡಬೇಕು. ಕರ್ತನಾಗಿ ಕಾಲ ತೊಳೆುಸಿಕೊಂಡಡೆ ಹಿಂದೆ ಮಾಡಿದ ಭಕ್ತಿಗೆ ಹಾನಿ. ಲಕ್ಕಗಾವುದ ದಾರಿಯ ಹೋಗಿ ಭಕ್ತನು ಭಕ್ತನ ಕಾಂಬುದು ಸದಾಚಾರ. ಅಲ್ಲಿ ಕೂಡಿ ದಾಸೋಹವ ಮಾಡಿದಡೆ ಕೂಡಿಕೊಂಬನು ನಮ್ಮ ಕೂಡಲಸಂಗಯ್ಯ. 246