ಭವಿಬೀಜವೃಕ್ಷದ ಫಲದೊಳಗೆ, ಭಕ್ತಿಬೀಜವೃಕ್ಷ

ವಿಕಿಸೋರ್ಸ್ದಿಂದ



Pages   (key to Page Status)   


ಭವಿಬೀಜವೃಕ್ಷದ ಫಲದೊಳಗೆ
ಭಕ್ತಿಬೀಜವೃಕ್ಷ ಪಲ್ಲವಿಸಿತ್ತು ! ಭಕ್ತಿಬೀಜವೃಕ್ಷದ ಫಲದೊಳಗೆ
ಶರಣಬೀಜವೃಕ್ಷ ಪಲ್ಲವಿಸಿತ್ತು ! ಶರಣಬೀಜವೃಕ್ಷದ ಫಲದೊಳಗೆ; ಕುಲನಾಶಕನಾದ ಶರಣ ಒಂದೆ ಬಸುರಲ್ಲಿ ಬಂದ_ ಬಂದು
ಬಳಗಕ್ಕೆ ತನ್ನ ಕುಲಕ್ಕೆ ತಾನೆ ಮಾರಿಯಾದ ಶರಣ. ಭವಿಭಕ್ತ ಭವಿಬೀಜವೃಕ್ಷದ ತಂಪು ನೆಳಲ ಬಿಟ್ಟು
ಕುಳ್ಳಿರ್ದಲ್ಲಿಯೆ; ಬಳಿ ಬಳಿಯೆ ಬಯಲಾದ ಶರಣ ! [ನಾದ]ಬಿಂದು ಬೀಜವಟ್ಟ ಹಾಳಾಗಿ ಹಾರಿಹೋದಲ್ಲಿ; ಇನ್ನೇನ ಹೇಳಲುಂಟು ? ಗುಹೇಶ್ವರನೆಂಬ ಲಿಂಗವನರಿದು ಭವಿಗೆ ಭವಿಯಾದಾತಂಗೆ ಇನ್ನೇನು ಪಥ (ಪದ?)ವುಂಟಯ್ಯಾ ?