ಭವಿಯಾಚಾರವ ಬಿಡದೆ ಭಯಾಗರವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಭವಿಯಾಚಾರವ ಬಿಡದೆ ಭಯಾಗರವ ಹೊಗದೆ
ಶಿವಾಚಾರದಲ್ಲಿ ನಡೆವ ನಾಯಿಗಳು ಬರಿದೆ ನಾವು ಶಿವಾಚಾರಿಗಳೆಂದರೆ ನಮ್ಮ ಶಿವಾಚಾರಿ ಶರಣ ಬಸವಣ್ಣ ಮೆಚ್ಚ ನೋಡಯ್ಯ. ಶಿವಾಚಾರದ ಮಾರ್ಗವನು
ಶಿವಾಚಾರದ ಮರ್ಮವನು
ಶಿವಾಚಾರದ ವಿಸ್ತಾರವನು ನಮ್ಮ ಶರಣ ಬಸವಣ್ಣ ಬಲ್ಲನಲ್ಲದೆ ಉದರವ ಹೊರವ ವೇಷಧಾರಿಗಳೆತ್ತಬಲ್ಲರಯ್ಯ ? ಅಂತಪ್ಪ ಶಿವಾಚಾರದ ವಿಸ್ತಾರ ಸಕೀಲ ಹೇಳಿಹೆ ಕೇಳಿರಣ್ಣ. ಅದೆಂತೆಂದೊಡೆ v ಲಿಂಗಾಚಾರವೆಂದು
ಸದಾಚಾರವೆಂದು
ಶಿವಾಚಾರವೆಂದು
ಭೃತ್ಯಾಚಾರವೆಂದು
ಗಣಾಚಾರವೆಂದು ಶಿವಾಚಾರವು ಐದುತೆರನಾಗಿಪ್ಪುದು ನೋಡಯ್ಯಾ. ಶ್ರೀ ಗುರು ಕರುಣಿಸಿಕೊಟ್ಟ ಲಿಂಗವನಲ್ಲದೆ ಅನ್ಯದೈವಂಗಳಿಗೆರಗದಿಹುದೇ ಲಿಂಗಾಚಾರ ನೋಡಯ್ಯ. ತಾ ಮಾಡುವ ಸತ್ಯ ಕಾಯಕದಿಂದ ಬಂದ ಅರ್ಥಾದಿಗಳಿಂದ ತನ್ನ ಕುಟುಂಬ ರಕ್ಷಣೆಗೊಂಬ ತೆರದಿ ಗುರುಲಿಂಗಜಂಗಮ ದಾಸೋಹಿಯಾಗಿಪ್ಪುದೇ ಸದಾಚಾರ ನೋಡಯ್ಯ. ಶಿವಭಕ್ತರಾದ ಲಿಂಗಾಂಗಿಗಳಲ್ಲಿ ಪೂರ್ವದ ಜಾತಿಸೂತಕಾದಿಗಳನ್ನು ವಿಚಾರಿಸದೆ ಅವರ ಮನೆಯಲ್ಲಿ ತಾ ಹೊಕ್ಕು ಒಕ್ಕು ಮಿಕ್ಕ ಪ್ರಸಾದವ ಕೊಂಬುದೇ ಶಿವಾಚಾರ ನೋಡಯ್ಯ. ಲಿಂಗಾಂಗಿಗಳಾದ ಶಿವಭಕ್ತರೇ ಮರ್ತ್ಯದಲ್ಲಿ ಮಿಗಿಲಹರೆಂದು ತಾನು ಅವರ ಭೃತ್ಯನೆಂದರಿದು ಅಂತಪ್ಪ ನಿಜಲಿಂಗಾಂಗಿಗಳ ಚಮ್ಮಾವುಗೆಯ ಕಾಯ್ದಿಪ್ಪುದೇ ಭೃತ್ಯಾಚಾರ ನೋಡಯ್ಯ. ಗುರುಲಿಂಗಜಂಗಮ ಪಾದೋದಕ ಪ್ರಸಾದ ರುದ್ರಾಕ್ಷಿ ಮಂತ್ರಗಳೆಂಬಷ್ಟಾವರಣಂಗಳು ತನ್ನ ಪ್ರಾಣಸ್ವರೂಪವಾಗಿ ಅವುಗಳ ನಿಂದೆಯನ್ನು ಕೇಳಿ ಸೈರಿಸದೆ ಶಿಕ್ಷಿಸುವೆನೆಂಬ ನಿಷ್ಠೆಗೊಂಡುದೇ ಗಣಾಚಾರ ನೋಡಯ್ಯ. ಇದಕ್ಕೆ ಸಾಕ್ಷಿ - ಪರಮರಹಸ್ಯೇ- 'ಲಿಂಗಾಚಾರಸ್ಸದಾಚಾರಶ್ಶಿವಾಚಾರಸ್ತಥವಚ ಭೃತ್ಯಾಚಾರೋ ಗಣಾಚಾರಃ ಪಂಚಾಚಾರಃ ಪ್ರಕೀರ್ತಿತಃ