ವಿಷಯಕ್ಕೆ ಹೋಗು

ಭವಿಯ ತಂದು ಭಕ್ತನ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಭವಿಯ ತಂದು ಭಕ್ತನ ಮಾಡಿ
ಪೂರ್ವಾಶ್ರಯವ ಕಳೆದ ಬಳಿಕ
ಮರಳಿ ಪೂರ್ವಾಶ್ರಯವನೆತ್ತಿ ನುಡಿವ
ಗುರುದ್ರೋಹಿಯ ಮಾತ ಕೇಳಲಾಗದು. ಹೆಸರಿಲ್ಲದ ಲಿಂಗಕ್ಕೆ ಹೆಸರಿಡುವ ಲಿಂಗದ್ರೋಹಿಯ ಮಾತ ಕೇಳಲಾಗದು. ಪೂರ್ವದಲ್ಲಿ ನಾಮವಿಲ್ಲದ ಗುರು
ಹೆಸರಿಲ್ಲದ ಲಿಂಗ
ಹೆಸರಿಲ್ಲದ ಶಿಷ್ಯ_ ಈ ತ್ರಿವಿಧಸ್ಥಲವನರಿಯದೆ ಕೆಟ್ಟರು ಗುಹೇಶ್ವರಾ.