ಭವಿಯ ಸಂಗವುಳ್ಳನ್ನಬರ ಭಕ್ತನಲ್ಲ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭವಿಯ ಸಂಗವುಳ್ಳನ್ನಬರ ಭಕ್ತನಲ್ಲ
ಪರಧನ ಪರಸತಿಯಾಸೆಯುಳ್ಳನ್ನಬರ ಮಾಹೇಶ್ವರನಲ್ಲ
ಸಕಲ ಪದಾರ್ಥವನೆಲ್ಲ ಗ್ರಹಿಸುವನ್ನಕ್ಕ ಪ್ರಸಾದಿಯಲ್ಲ
ಪ್ರಾಣಲಿಂಗದಲ್ಲಿ ಸ್ವಸ್ಥಿರವಾಗದನ್ನಕ್ಕ ಪ್ರಾಣಲಿಂಗಿಯಲ್ಲ
ಕರಣಾದಿಗಳು ವರ್ತಿಸುವನ್ನಕ್ಕ ಶರಣನಲ್ಲ
ಜನನಮರಣವುಳ್ಳನ್ನಕ್ಕ ಐಕ್ಯನಲ್ಲ. ಕೂಡಲಚೆನ್ನಸಂಗಮದೇವರಲ್ಲಿ ಈ ಷಡುಸ್ಥಲದ ನಿರ್ಣಯವ ಬಸವಣ್ಣನೆ ಬಲ್ಲ.