ಭಾವಕ್ಕೆ ಪೂಜ್ಯನಲ್ಲ, ಬಹಿರಂಗದೊಳಗಡಗಿತ್ತೆಂದಡೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಭಾವಕ್ಕೆ ಪೂಜ್ಯನಲ್ಲ
ಬಹಿರಂಗದೊಳಗಡಗಿತ್ತೆಂದಡೆ ಕ್ರಿಯಾಶಬ್ದನಲ್ಲ. ಅರಿವಿನೊಳಗಡಗಿತ್ತೆಂದಡೆ ಮತಿಗೆ ಹವಣಲ್ಲ. ಭಾವ ನಿರ್ಭಾವ ನಿಶ್ಶೂನ್ಯವನು ಕಾಬ ಪರಿಯಿನ್ನೆಂತು ಹೇಳಾ? ಅದ ಕಂಡು
ತನ್ನೊಳಗಿಂಬಿಟ್ಟುಕೊಂಬ ಪರಿಯೆಂತು ಹೇಳಾ
ನಮ್ಮ ಗುಹೇಶ್ವರಲಿಂಗದಲ್ಲಿ
ಸಂಗನಬಸವಣ್ಣಾ ?