ಭಾವಗೆಟ್ಟು ಭವನಷ್ಟನು ಒಡಹುಟ್ಟಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಭಾವಗೆಟ್ಟು ಭವನಷ್ಟನು ಒಡಹುಟ್ಟಿದ ಐವರ ಕೈಬಿಟ್ಟನು. ಭಂಡನು ಲಜ್ಜೆಭಂಡನು
ಕಂಡಡೆ ನುಡಿಸದಿರಾ ಮಾಯಾದೇವಿ. ಅರಿವೆಯ (ಅರಿವ?)ನುಟ್ಟು ನೆರೆ ಮರುಳಾದನು ಹುಟ್ಟ ಮುರಿದನು ಮಡಕೆಯನೊಡೆದನು ಆದಿ ಪುರಾತನು ಅಚಲ ಲಿಂಗೈಕ್ಯನು. ಗುಹೇಶ್ವರನಲ್ಲಯ್ಯಂಗೆ ಮೂಗಿಲ್ಲ ಮಗಳೆ.