ಭೂಮಿ ನಿನ್ನದಲ್ಲ

ವಿಕಿಸೋರ್ಸ್ ಇಂದ
Jump to navigation Jump to search

ರಾಗ:ಪಂತುವರಾಳಿ
ತಾಳ:ಏಕತಾಳ
ರಚನೆ:ಅಲ್ಲಮಪ್ರಭು

ಭೂಮಿ ನಿನ್ನದಲ್ಲ
ಹೇಮ ನಿನ್ನದಲ್ಲ
ಕಾಮಿನಿ ನಿನ್ನವಳಲ್ಲ
ಅವು ಜಗಕ್ಕಿಕ್ಕಿದ ವಿಧಿ

ನಿನ್ನ ಒಡವೆಯಂಬುದು ಜ್ಞಾನರತ್ನ
ಅಂತಪ್ಪ ದಿವ್ಯರತ್ನವ ಕೆಡಗೊಡದೆ
ಆ ರತ್ನವ ನೀನು ಅಲಂಕರಿಸಿದೆಯಾದೆಡೆ
ನಮ್ಮ ಗುಹೇಶ್ವರ ಲಿಂಗದಲ್ಲಿ
ನಿನ್ನಿಂದ ಬಿಟ್ಟು ಸಿರಿವಂತರಿಲ್ಲ
ಕಣಾ ಎಡಬಿಡದೆ