ವಿಷಯಕ್ಕೆ ಹೋಗು

ಮಂಕುತಿಮ್ಮನ ಕಗ್ಗ-ಕಂತು ೧೨.

ವಿಕಿಸೋರ್ಸ್ದಿಂದ

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ;:ಅರ್ಥಸಹಿತ

[ಸಂಪಾದಿಸಿ]

ಪದ್ಯ– ೩೩೧/331

[ಸಂಪಾದಿಸಿ]
ಸತ್ಯ ಶಿವ ಸುಂದರದ ಸಚ್ಚಿದಾನಂದನದ ।
ಭಿತ್ತಿಯಲಿ ಬಣ್ಣಬಣ್ಣದ ಜೀವಚಿತ್ರ।।
ನಿತ್ಯ ನೀನದ ನೆನೆದು ಚಿತ್ರದಲಿ ಮನವಿರಿಸೆ ।
ವೃತ್ತಿ ತನ್ಮಯವಹುದೊ – ಮಂಕುತಿಮ್ಮ ।।
  • ಸಚ್ಚಿದಾನಂದನದ = ಸತ್+ಚಿತ್+ಆನಂದನದ, ನೀನದ = ನೀನು + ಅದ, ಮನವಿರಿಸೆ =ಮನವ+ಇರಿಸೆ, ತನ್ಮಯವಹುದೊ = ತನ್ಮಯವು+ಅಹುದೊ,
  • ಶಿವ = ಶುಭ, ಬಿತ್ತಿಯಲಿ + ಪಟದಲಿ, ಮನವಿರಿಸೆ = ತನ್ಮಯನಾದರೆ, ವೃತ್ತಿ=ಕಾಯಕ.
  • ಜಗತ್ತಿನ ಸೃಷ್ಟಿಯ ಚಿತ್ರ, ಸತ್ಯವಾಗಿಯೂ ಮಂಗಳಕರವಾಗಿಯೂ,ಸುಂದರವಾಗಿಯೂ ಇದ್ದು, ಸಚ್ಚಿದಾನಂದ ಸ್ವರೂಪದಿಂದಿದೆ. ಪ್ರತಿ ನಿತ್ಯ ನೀನು ಅಂತಹ ಚಿತ್ರದಲ್ಲಿ ನಿನ್ನ ಚಿತ್ತವನು ಇರಿಸಿದರೆ ನೀ ಮಾಡುವ ಕೆಲಸ ತನ್ಮಯತೆಯಿಂದ ಕೂಡಿರುತ್ತದೆ ಎಂದು ನಾವು, ಈ ಪರಮಾತ್ಮನ ಸೃಷ್ಟಿಯಲ್ಲಿ ಏನನ್ನು ಮತ್ತು ಜಗಚ್ಚಿತ್ರವನ್ನು ಹೇಗೆ ಕಾಣಬೇಕು.

[]

♠೫೫೫೫೫೫೫೫೫೫೫೫೫೫೫೫೫೫♠
-೦♦♦♣♣♣♣♣♣♣♣♣♣♣♣♦♦೦-

ಪರಿವಿಡಿ

[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

[ಸಂಪಾದಿಸಿ]
  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.