ವಿಷಯಕ್ಕೆ ಹೋಗು

ಮಂಕುತಿಮ್ಮನ ಕಗ್ಗ-ಕಂತು ೧೩.

ವಿಕಿಸೋರ್ಸ್ದಿಂದ

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ; :ಅರ್ಥಸಹಿತ

[ಸಂಪಾದಿಸಿ]

ಪದ್ಯ – ೩೬೧/361

[ಸಂಪಾದಿಸಿ]
ಎಲ್ಲಿಯೋ ವಿಧಿಯ ಗೂಢದ ಕರ್ಮಶಾಲೆಯಲಿ।
ನಿಲ್ಲದಾಡುತ್ತಿಹವು ಯಂತ್ರ ಕೀಲುಗಳು॥
ಎಲ್ಲಾ ಆಗುಹೋಗುಗಳುಮಾ ಚಕ್ರಗತಿಯಂತೆ।
ತಲ್ಲಣವು ನಿನಗೇಕೆ? ಮಂಕುತಿಮ್ಮ ॥
  • ನಿಲ್ಲದಾಡುತ್ತಿಹವು=ನಿಲ್ಲದೆ+ಆಡುತಿಹವು,ಆಗುಹೋಗುಗಳುಮಾ = ಆಗುಹೋಗುಗಳುಂ+ಆ,
  • ಬಹಳ ಗುಪ್ತವಾಗಿ ನಡೆಯುವ ವಿಧಿಯ ಕಾರ್ಯಾಂಗದಲ್ಲಿ ಜಗತ್ತಿನ ಎಲ್ಲ ಜೀವಿಗಳ ಆಗುಹೋಗುಗಳ ನಿರ್ಣಯಿಸುವ ಚಕ್ರವು ನಿರಂತರವಾಗಿ ತಿರುಗುತ್ತಿರುತ್ತದೆ. ಅದು ಗೂಡತೆಯಿಂದ ನಡೆಯುತ್ತಿದೆ ಮತ್ತು ಅದು ನಿನಗೆ ಅರ್ಥವಾಗದ ವಿಷಯವಾದದ್ದರಿಂದ,ನೀ ಏಕೆ ತಲ್ಲಣ ಪಡುತ್ತೀಯೆ.

[]

♠೫೫೫೫೫೫೫೫೫೫೫೫೫೫೫೫೫೫♠
-೦♦♦♣♣♣♣♣♣♣♣♣♣♣♣♦♦೦-

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

[ಸಂಪಾದಿಸಿ]
  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.