ವಿಷಯಕ್ಕೆ ಹೋಗು

ಮಂಕುತಿಮ್ಮನ ಕಗ್ಗ-ಕಂತು ೨.

ವಿಕಿಸೋರ್ಸ್ದಿಂದ
<ಮಂಕುತಿಮ್ಮನ ಕಗ್ಗ
<ಮಂಕುತಿಮ್ಮನ ಕಗ್ಗ-ಕಂತು ೧.
<ಮಂಕುತಿಮ್ಮನ ಕಗ್ಗ-ಕಂತು ೨; ಪದ್ಯ ೩೧ ರಿಂದ ೬೦-[ಮೊದಲ ಸಾಲು.]

ಮಂಕುತಿಮ್ಮನ ಕಗ್ಗ;ಪದ್ಯ ೩೧

[ಸಂಪಾದಿಸಿ]

ಸತ್ಯಾನ್ವೇಷಣೆ - 031

[ಸಂಪಾದಿಸಿ]
ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? |
ನಚ್ಚುವುದೆ ಮರೆಯೋಲಿಹುದನೆ ಸತ್ಯವೆಂದು ? ||
ಅಚ್ಚರಿಯ ತಂತ್ರವಿದು ಬ್ರಹ್ಮ ಸೃಷ್ಟಿಗಳೇಕೋ |
ಮುಚ್ಚಿಹವು ಸಾಜತೆಯ- ಮಂಕುತಿಮ್ಮ ||
  • ನಚ್ಚುವುದು = ನೆಚ್ಚುವುದು, ನಂಬುವುದು, ಇಹುದನೆ = ಇರುವುದನ್ನು , ಸಾಜತೆಯ = ಸಹಜತೆಯ.
  • ಸತ್ಯವಾದ ಆ ಪರಮಾತ್ಮವಸ್ತು ಅಸತ್ಯವಾದ ಈ ಸೃಷ್ಟಿಯ ಹಿಂದೆ ಬಚ್ಚಿಟ್ಟುಕೊಂಡಿರುವುದೇ? ಜಗತ್ತು ಕಾಣುತ್ತದೆ. ಇಂದ್ರಿಯ ಗ್ರಾಹ್ಯ. ಇದನ್ನು ಮಿಥ್ಯವೆಂದು ಅಸಥ್ಯವೆಂದು ಹೇಳುತ್ತಾರೆ. ಆದರೆ ಅದನ್ನು ಸೃಜಿಸಿದ ಶಕ್ತಿ ಕಾಣುವುದಿಲ್ಲ. ಭಾವಿಸಬಹುದು ಮತ್ತು ಕೇವಲಅನುಭವ ವೇಧ್ಯ. ಅದನ್ನು ಸತ್ಯವೆನ್ನುತ್ತಾರೆ.ಕಣ್ಣಿಗೆ ಕಾಣದೆ, ಮರೆಯಲ್ಲಿರುವುದನ್ನು ಸತ್ಯವೆಂದು ನಂಬುವುದು ಹೇಗೆ. ಈ ಸೃಷ್ಟಿಕರ್ತ ಮತ್ತು ಅವನ ಸೃಷ್ಟಿಯ ತಂತ್ರ ಬಹಳ ಆಶ್ಚರ್ಯಕರವಾದವು ಮತ್ತು ಸಹಜತೆಯು ಸ್ಪಷ್ಟವಿಲ್ಲದೆ ಮುಚ್ಚಿಹುದು.

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ

[ಸಂಪಾದಿಸಿ]
  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.