ಮಂಕುತಿಮ್ಮನ ಕಗ್ಗ-ಕಂತು ೮.

ವಿಕಿಸೋರ್ಸ್ದಿಂದ

<ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ; :ಅರ್ಥಸಹಿತ[ಸಂಪಾದಿಸಿ]

ಪದ್ಯ – ೨೧೧[ಸಂಪಾದಿಸಿ]

ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ
ಕೊನೆಯಲ್ಲಿ? ಚಿಂತಿಸೆಲೊ – ಮಂಕುತಿಮ್ಮ
  • ತಣಿಸಲದನೊಗೆಯುವುದು = ತಣಿಸಲು + ಅದನು + ಒಗೆಯುವುದು// ಮನುಜನೇಳಿಗೆಯದರಿನ್= ಮನುಜನ+ಏಳಿಗೆ+ಅದರಿನ್// ಮನಸಿನೇಳಿಗೆಗೆ = ಮನಸಿನ+ ಏಳಿಗೆಗೆ.
  • ಮನುಷ್ಯನ ಮನಸ್ಸು ಬೆಳೆದಂತೆಲ್ಲ ಅವನ ಮನಸ್ಸಿನ ಹಸಿವೂ ಸಹ ಬೆಳೆಯುತ್ತದೆ. ಆ ಹಸಿವನ್ನು ಇಂಗಿಸಲು ಮನಸ್ಸು ಬಗೆ ಬಗೆಯ ಉಪಾಯಗಳನ್ನು ಹುಡುಕುತ್ತದೆ. ಈ ರೀತಿಯ ಹಸಿವು ಮತ್ತು ಆ ಹಸಿವಿನ ತಣಿಯುವಿಕೆಯಿಂದ ಮನುಷ್ಯನ ಬಾಹ್ಯ ಜೀವನ ಉತ್ತಮವಾಗಬಹುದು.ಈ ರೀತಿ ಆಸೆ ಪಡುವುದು, ಆ ಆಸೆಗಳನ್ನು ತೀರಿಸಿಕೊಳ್ಳಲು ಹಲವಾರು ಉಪಾಯಗಳನ್ನು ಮಾಡುವುದು ಮತ್ತು ಈ ಉಪಾಯಗಳಿಂದ ಉನ್ನತ ಸ್ಥಾನ ಹೊಂದುವುದು.

[೧]

♠೫೫೫೫೫೫೫೫೫೫೫೫೫೫೫೫೫೫♠
-೦♦♦♣♣♣♣♣♣♣♣♣♣♣♣♦♦೦-

ನೋಡಿ[ಸಂಪಾದಿಸಿ]

ನೋಡಿ[ಸಂಪಾದಿಸಿ]

ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ


ಉಲ್ಲೇಖ[ಸಂಪಾದಿಸಿ]

  1. ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.