Library-logo-blue-outline.png
View-refresh.svg
Transclusion_Status_Detection_Tool

ಮಜ್ಜನಕ್ಕೆರೆದು ಫಲವ ಬೇಡುವರಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಮಜ್ಜನಕ್ಕೆರೆದು ಫಲವ ಬೇಡುವರಯ್ಯಾ
ತಮಗೆಲ್ಲಿಯದೊ ಆ ಫಲವು ಸಿತಾಳಕ್ಕಲ್ಲದೆ ? ಪತ್ರೆ ಪುಷ್ಪದಲ್ಲಿ ಪೂಜಿಸಿ ಫಲವ ಬೇಡುವರಯ್ಯಾ
ತಮಗೆಲ್ಲಿಯದೊ ಆ ಫಲವು ಗಿಡುಗಳಿಗಲ್ಲದೆ ? ಸೈದಾನವ(ಸುಯಿಧಾನವ ?)ನರ್ಪಿಸಿ ಫಲವ ಬೇಡುವರಯ್ಯಾ ತಮಗೆಲ್ಲಿಯದೊ ಆ ಫಲವು ಹದಿನೆಂಟು ಧಾನ್ಯಕ್ಕಲ್ಲದೆ ? ಲಿಂಗದೊಡವೆಯ ಲಿಂಗಕ್ಕೆ ಕೊಟ್ಟು
ಫಲವ ಬೇಡುವ ಸರ್ವ ಅನ್ಯಾಯಿಗಳನೇನೆಂಬೆ ಗುಹೇಶ್ವರಾ !