ಮಜ್ಜನಕ್ಕೆರೆವಡೆ ಭೂತವಿಕಾರ. ಪ್ರಮಥ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಜ್ಜನಕ್ಕೆರೆವಡೆ ಭೂತವಿಕಾರ. ಪ್ರಮಥ ಗಣಂಗಳೆಲ್ಲರೂ ಪ್ರೇತರು. ವೀರಭದ್ರ ಗಣಂಗಳೆಲ್ಲರೂ ಬ್ರಹ್ಮರಾಕ್ಷಸರು. ಅರ್ಧನಾರೀಶ್ವರರೆಲ್ಲರೂ ಚಿಕ್ಕಮಕ್ಕಳ ಮೇಲೆ
ತಪ್ಪ ಸಾಧಿಸಿ ಕಾಡಿ ಉಂಬರು._ ಈ ನಾಲ್ಕು ಸ್ಥಾನದೊಳಗೆ ಆವುದೂ ಅಲ್ಲ ಗುಹೇಶ್ವರಾ ನಿಮ್ಮ ಲಿಂಗೈಕ್ಯವು !