ಮಡಿವಾಳ ಮಡಿವಾಳನೆಂಬರು, ಮಡಿವಾಳನೆಂಬುದನಾರೂ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಡಿವಾಳ ಮಡಿವಾಳನೆಂಬರು
ಮಡಿವಾಳನೆಂಬುದನಾರೂ ಅರಿಯರು
ಎನ್ನ ಮಲಯದಲ್ಲಿ ಹೊದಕುಳಿಗೊಂಡ ಮನದ ಮೈಲಿಗೆಯ ತಂದು
ತನ್ನ ಮನೆಗೆ ಕೊಂಡುಹೋಗಿ ಹಾಯ್ಕಿದಡೆ
ಕೈಮುಟ್ಟಿದಡೆ ಆಗದೆಂದು ತನ್ನ ಪಾದದೊಳಗೆ ಮೆಟ್ಟಿ
ಅಲುಬಿ ಸೆಳೆದನಯ್ಯಾ. ತನ್ನ ನಿರ್ಮಲವ ಕೊಟ್ಟನೆನಗೆ
ಆ ಕೊಟ್ಟ ಬೀಳುಡಿಗೆಯ ಹೊದೆದುಕೊಂಡೆನಾಗಿ
ಮಡಿವಾಳ ಮಾಚಿತಂದೆಯ ಕೃಪೆಯಿಂದಲಾನು ಬದುಕಿದೆನಯ್ಯಾ
ಕೂಡಲಸಂಗಮದೇವಾ.