ಮಥನದ ಲೀಲೆಯಲ್ಲಿ ಹುಟ್ಟುವುದೇ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮಥನದ ಲೀಲೆಯಲ್ಲಿ ಹುಟ್ಟುವುದೇ ಬ್ರಹ್ಮವು ? ಶ್ರುತಿ ಸ್ಮೃತಿಗಳಿಗೆ ಅಳವಡದು ನೋಡಾ ! ಪೃಥ್ವಿಯೊಳಗಿಲ್ಲದ ಅಚಲವಪ್ಪ ಘನವನು
ಸಚರಾಚರದಲ್ಲಿ ಭರಿತವೆಂತೆಂಬೆ ? ಇಲ್ಲದ ಲಿಂಗವನಲ್ಲಲ್ಲಿಗೆ ಉಂಟುಮಾಡುವ ಈ ಲೀಲೆಯ ವಾರ್ತೆ ಎಲ್ಲಿಯದೊ ಗುಹೇಶ್ವರಾ ?