ಮನವೆಂಬ ಹಾರಿ, ಮರ್ಕಟನು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನವೆಂಬ ಮರ್ಕಟನು ತನುವೆಂಬ ವೃಕ್ಷವನೇರಿ
ಇಂದ್ರಿಯಂಗಳೆಂಬ ಶಾಖೆಶಾಖೆಗೆ ಹಾರಿ
ವಿಷಯಂಗಳೆಂಬ ಹಣ್ಣು ಫಲಂಗಳ ಗ್ರಹಿಸಿ
ಭವದತ್ತ ಮುಖವಾಗಿ ಹೋಗುತ್ತಿದೆ ನೋಡಾ ! ಈ ಮನವೆಂಬ ಮರ್ಕಟನ
ನಿಮ್ಮ ನೆನಹೆಂಬ ಪಾಶದಲ್ಲಿ ಕಟ್ಟಿ
ಎನ್ನನುಳುಹಿಕೊಳ್ಳಯ್ಯ ಅಖಂಡೇಶ್ವರಾ.