ಮನವ ತೊಳೆದು ನಿರ್ಮಲವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನವ ತೊಳೆದು ನಿರ್ಮಲವ ಮಾಡಿಹೆನೆಂಬ ಯೋಗವೆಂತುಟೊ ? ಮನವ ಹಿಡಿದು ತಡೆದಿಹೆನೆಂಬವರ ಮರುಳುಮಾಡಿ ಕಾಡಿತ್ತು ನೋಡಾ ಮನವು ! ಮನ ವಿಕಲ್ಪಜ್ಞಾನದಿಂದರಿದು
ಅದ ಶುದ್ಧವ ಮಾಡಿಹೆನೆಂಬುದು ತಾನೆ ಮನ ನೋಡಾ. ನಮ್ಮ ಗುಹೇಶ್ವರಲಿಂಗದ ಅನುವನರಿದಿಹೆನೆಂಬವರು
ಮನವಿಲ್ಲದಿರಬೇಕು ನೋಡಾ ಸಿದ್ಧರಾಮಯ್ಯಾ.