ಮನ ಉಂಟೆ ಮರುಳೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮನ ಉಂಟೆ ಮರುಳೆ ಶಿವಯೋಗಿಗೆ ? ಮತ್ತೊಂದು ಮನಮಗ್ನ ಉಂಟೆ ಶಿವಯೋಗಿಗೆ ? ಇಲ್ಲದ ಮನವ ಉಂಟೆಂದು ನುಡಿದು
ಅಡಗಿಸಿದೆನೆಂಬ ಮಾತು ಮನವ ನೆಲೆಮಾಡಿ ತೋರುತ್ತದೆ. ಗುಹೇಶ್ವರನ ಅರಿದ ಶರಣಂಗೆ ತೋರಲಿಲ್ಲ ಅಡಗಲಿಲ್ಲ ಕೇಳಾ.