ವಿಷಯಕ್ಕೆ ಹೋಗು

ಮನ ಬಸಿರಾದಡೆ ಕೈ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಮನ ಬಸಿರಾದಡೆ ಕೈ ಬೆಸಲಾಯಿತ್ತ ಕಂಡೆ ! ಕರ್ಪುರದ ಕಂಪ ಕಿವಿ ಕುಡಿಯಿತ್ತ ಕಂಡೆ ! ಮುತ್ತಿನ ಢಾಳವ ಮೂಗು ನುಂಗಿತ್ತ ಕಂಡೆ ! ಕಂಗಳು ಹಸಿದು ವಜ್ರವ ನುಂಗಿತ್ತ ಕಂಡೆ ! ಒಂದು ನೀಲದೊಳಗೆ ಮೂರುಲೋಕವಡಗಿತ್ತ ಕಂಡೆ
ಗುಹೇಶ್ವರಾ