ಮನ ಮುಕ್ತಿ ವಿವೇಕವೆಂಬ

ವಿಕಿಸೋರ್ಸ್ದಿಂದ



Pages   (key to Page Status)   


ಮನ ಮುಕ್ತಿ ವಿವೇಕವೆಂಬ ಅಕ್ಕಿಯನು ಗುಪಿತವೆಂಬ ಒರಳೊಳಗಿಕ್ಕಿ ಅಭಿನ್ನಮಥನವೆಂಬ ಒನಕೆಯಲ್ಲಿ ಥಳಿಸಿ ಕಲ್ಮಷವೆಂಬ võ್ಞಡ ಹಾರಿಸಿ
ಸಮತೆಯೆಂಬ ಸಲಿಲದಲ್ಲಿ ಜಾಳಿಸಿ
ಅಳುಪು ಎಂಬ ಹರಳ ಕಳೆದು ದಯಾಮೃತವೆಂಬ ಹಾಲಿನಲ್ಲಿ ಬೋನವ ಮಾಡಿ ಸಮರಸ ರುಚಿಕರದಿಂದ ಶಾಕಪಾಕಂಗಳಂ ಮಾಡಿ ನೆನಹಿನ ಲವಲವಕಿಯೆ ಅಭಿಗಾರವಾಗಿ ನಿರ್ಮಲವೆಂಬ ಶಿವದಾನವ ಗಡಣಿಸಿ ಕಾಯ್ದಿದ್ದರಯ್ಯಾ. ಪಂಚೇಂದ್ರಿಯವೆಂಬ ಸೊಣಗ ಮುಟ್ಟದಂತೆ ಕಾಯ್ದಿದ್ದರಯ್ಯಾ. ಷಡುವರ್ಗವೆಂಬ ತೊತ್ತಿರು ಮುಟ್ಟದಂತೆ ಕಾಯ್ದಿದ್ದರಯ್ಯಾ. ಅಷ್ಟಮದವೆಂಬ ಮಕ್ಕಳು ಮುಟ್ಟದಂತೆ ಕಾಯ್ದಿದ್ದರಯ್ಯಾ. ಇನಿತು ಮುಖ್ಯವಾದ ಹೀನಂಗಳಾವೂ ಮುಟ್ಟದಂತೆ ಕಾಯ್ದಿದ್ದರಾಗಿ
ಈ ಬೋನ ಗುಹೇಶ್ವರಲಿಂಗಕ್ಕೆ ಅರ್ಪಿತವಾಯಿತ್ತು
ಕಾಣಾ ಚೆನ್ನಬಸವಣ್ಣಾ.