ಮನ ಮುಟ್ಟಿದ ಭಕ್ತಿಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮನ ಮುಟ್ಟಿದ ಭಕ್ತಿಗೆ ತನುವೆ ಅರ್ಪಿತ
ತನು ಮುಟ್ಟಿದ ಭಕ್ತಿಗೆ ಮನವೆ ಅರ್ಪಿತವಯ್ಯಾ
ಎನ್ನ ತನುಮನವೆರಡೂ ನಿಮ್ಮ ಚರಣಕ್ಕೆ ವೇದ್ಯ ನೋಡಯ್ಯಾ. ದೀರ್ಘದಂಡನಮಸ್ಕಾರಂ ನಿರ್ಲಜ್ಜಃ ಗುರುಸನ್ನಿಧೌ ಶರೀರಮರ್ಥಂ ಪ್ರಾಣಂ ಚ ಸದ್ಗುರುಭ್ಯೋ ನೀವೇದಯೇತ್ ಎಂದುದಾಗಿ ತ್ರಾಹಿ ತ್ರಾಹಿ ಶರಣಾರ್ಥಿ ನೀವೇ ಬಲ್ಲಿರಿ ಕೂಡಲಸಂಗಮದೇವಾ.