ಮರೆದೊರಗಿ, ಕನಸ ಕಂಡು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮರೆದೊರಗಿ
ಕನಸ ಕಂಡು ಹೇಳುವಲ್ಲಿ ಸತ್ತ ಹೆಣ ಎದ್ದಿತ್ತು. ತನ್ನ ಋಣ ನಿಧಾನ ಎದ್ದು ಕರೆಯಿತ್ತು. ಹೆಪ್ಪಿಟ್ಟ ಹಾಲು ಗಟ್ಟಿತುಪ್ಪಾಗಿ ಸಿಹಿಯಾಯಿತ್ತು. ಇದಕ್ಕೆ ತಪ್ಪ ಸಾಧಿಸಲೇಕೆ ಚೆನ್ನಮಲ್ಲಿಕಾರ್ಜುನದೇವರ ದೇವನಣ್ಣಗಳಿರಾ ?