ಮಲವಿಶಿಷ್ಟರಾದ ಮಾನವರು ಬಹಿರಂಗದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಲವಿಶಿಷ್ಟರಾದ ಮಾನವರು ಬಹಿರಂಗದ ತೀರ್ಥವ ಹೊಕ್ಕು
ಅಲ್ಲಿ ಕಾಲು ಕೈ ಮುಂತಾದ ಸರ್ವಾಂಗವ ತೊಳೆದು
ಪರಿಶುದ್ಧರಾದೆವೆಂದು ಭಾವಿಸುತಿಪ್ಪರು ನೋಡಾ. ಮತ್ತೆ ಆ ಮಲಿನವಾದ ಜಲವನೆ ತೀರ್ಥವೆಂದು ಲಿಂಗಕ್ಕಭಿಷೇಕಂಗೆಯ್ಯುತಿಪ್ಪರು ನೋಡಾ. ಶಿವಜ್ಞಾನಿಗಳ ಪಾದೋದಕವು ಪರಿಶುದ್ಧವಲ್ಲವೆಂದು ಗಳಹುತಿಪ್ಪರು ನೋಡಾ. ಇಂತೀ ಮರುಳರಾಟವ ಕಂಡು
ನಮ್ಮ ಪ್ರಮಥರು ಗಹಗಹಿಸಿ ನಗುತಿಪ್ಪರು ನೋಡಾ ಕೂಡಲಚೆನ್ನಸಂಗಮದೇವಾ