ಮಸಿಯನೇಸುಕಾಲ ಬೆಳಗಿದರೆ, ಬಿಳಿದಾಗಬಲ್ಲುದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಸಿಯನೇಸುಕಾಲ ಬೆಳಗಿದರೆ
ಬಿಳಿದಾಗಬಲ್ಲುದೆ ಕರ್ಮಸ್ಥಿತಿ ಬೆನ್ನ ಬಿಡದು. ಅನಂತಕೋಟಿ ಸನ್ಮಾನವ ಮಾಡಿದರೇನು ನಿಮಿಷದ ಉದಾಸೀನ ಕೆಡಿಸಿತ್ತು. ಕೂಡಲಸಂಗಮದೇವಾ ನಿಮ್ಮ ನಂಬಿಯೂ ನಂಬದ ಡಂಬಕ ನಾನಯ್ಯಾ. 383