ಮಹದೈಶ್ವರ್ಯವು ಪರಮಪವಿತ್ರನೆನಿಸಬೇಕಾದಡೆ ಕೈಗೂಡುವಡೆ
ಗೋಚರ
ಲೇಖಕರು: ಷಣ್ಮುಖಸ್ವಾಮಿ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮಹದೈಶ್ವರ್ಯವು ಕೈಗೂಡುವಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ಪರಮಪವಿತ್ರನೆನಿಸಬೇಕಾದಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ಸರ್ವೈಶ್ವರ್ಯ ಸರ್ವಸಿದ್ಧಿ ದೊರೆಕೊಂಬುವಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ಮಹಾಪುಣ್ಯದ ಫಲವು ಪ್ರಾಪ್ತಿಸುವಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ದಿನದಿನಕ್ಕೆ ಪಾಪ ಪಲ್ಲಟವಪ್ಪಡೆ ಶ್ರೀ ವಿಭೂತಿಯಿಂದಲ್ಲದೆ ಇಲ್ಲ ನೋಡಾ. ಅಂಗಕ್ಕೆ ಶ್ರೀ ವಿಭೂತಿಯೇ ಶೃಂಗಾರ ನೋಡಾ. ಅದೆಂತೆಂದೊಡೆ : `` ಶ್ರೀಕರಂ ಚ ಪವಿತ್ರಂ ಚ ಹಾರಾದ್ಯಾಭರಣಂ ತಥಾ