ಮಹಾಕ್ಷತ್ರಿಯ/ಅಧ್ಯಕ್ಷಕರ ಮಾತು

ವಿಕಿಸೋರ್ಸ್ ಇಂದ
Jump to navigation Jump to search

ಅಧ್ಯಕ್ಷಕರ ಮಾತು

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡದ ಮೇರುಕೃತಿಗಳನ್ನು ಪುನರ್ ಮುದ್ರಣ ಮಾಡಲು ಒಂದು ಯೋಜನೆಯನ್ನು ಕೈಗೊಂಡಿತು. ಕೃತಿಗಳ ಆಯ್ಕೆಗಾಗಿ ಸರ್ಕಾರವು ಒಂದು ಸಮಿತಿಯನ್ನು ರಚಿಸಿತು. ಈ ಮಹತ್ವದ ಯೋಜನೆಯ ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುವ ಸುಯೋಗ ನನ್ನದಾಯಿತು.

ಈ ಯೋಜನೆಯ ಮಹತ್ವವನ್ನು ನಾನು ವಿವರಿಸುವ ಅಗತ್ಯವಿಲ್ಲ, ಕನ್ನಡದ ಶ್ರೇಷ್ಠ ಕೃತಿಗಳನ್ನು ಸುಲಭ ಬೆಲೆಗೆ ಕನ್ನಡಿಗರ ಕೈಗಳಲ್ಲಿರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಲವು ಯೋಜನೆಗಳನ್ನು ಕೈಗೊಂಡಿರುವುದಕ್ಕಾಗಿ ಸರ್ಕಾರವನ್ನೂ ಇಲಾಖೆಯನ್ನೂ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಕನ್ನಡ ಸಂಸ್ಕೃತಿಗೆ ಈ ಯೋಜನೆಗಳು ಮಹತ್ವದ ಕೊಡುಗೆಯನ್ನು ನೀಡುತ್ತವೆ.

ಕನ್ನಡದ ಮೇರುಕೃತಿಗಳನ್ನು ಆರಿಸುವುದು ಸುಲಭದ ಕೆಲಸವಲ್ಲ, ಇಂತಹ ಆಯ್ಕೆಯಲ್ಲಿ ಬೇರೆ ಬೇರೆ ಅಭಿಪ್ರಾಯಗಳಿಗೆ ಸಾಧಾರವಾಗಿಯೇ ಅವಕಾಶವಿರುತ್ತದೆ. ಕನ್ನಡ ನಾಡಿನ ಶ್ರೇಷ್ಠ ಸಾಹಿತಿಗಳು ಈ ಸಮಿತಿಯ ಸದಸ್ಯರಾಗಿದ್ದದ್ದು ಸುದೈವದ ಸಂಗತಿ. ಕೃತಿಗಳನ್ನು ಚರ್ಚಿಸಿ ಮಹತ್ವದ ನಿರ್ಧಾರಕ್ಕೆ ಬಂದ ಸಮಿತಿಯು ಸಾಧ್ಯವಾದ ಕಾರ್ಯವನ್ನು ಸಾಧಿಸಿದೆ. ಇದಕ್ಕಾಗಿ ನಾನು ಸಮಿತಿಯ ಎಲ್ಲ ಸದಸ್ಯರಿಗೂ ಕೃತಜ್ಞನಾಗಿದ್ದೇನೆ.

ಈ ಕಾರ್ಯದ ನಿರ್ವಹಣೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ఇలా విచేంయ ನಿರ್ದೆಶಕರಾದ ಶ್ರೀ ಮನು ಬಳಿಗಾರ್ ಅವರು ನೆರವಾಗಿದ್ದಾರೆ. ಅವರ ಮತ್ತು ಅವರ ಸಿಬ್ಬಂದಿಯವರ ಅಮೂಲ್ಯ ಸಹಕಾರಕ್ಕೆ ನಾನು ಕೃತಜ್ಞ

ಕನ್ನಡ ನಾಡಿನ ಮನೆಮನೆಗಳಲ್ಲಿ ಸಾಹಿತ್ಯದ ಮಂಗಳ ದೀಪದ ಬೆಳಕನ್ನು ಹರಡುವ ಈ ಯೋಜನೆಯ ಪೂರ್ಣಪ್ರಯೋಜನವನ್ನು ಕನ್ನಡಿಗರು ಪಡೆದುಕೊಳ್ಳಲಿ ಎಂದು ಹಾರೈಸುತ್ತೇನೆ.

ಸಿರಿಗನ್ನಡಂ ಗೆಲ್ಲೆ! ದಿನಾಂಕ ೧೬-೦೨-೨೦೧೦ ಎಲ್.ಎಸ್.ಶೇಷಗಿರಿ ರಾವ್ ಅಧ್ಯಕ್ಷ ಕನ್ನಡದ ಮೇರುಕೃತಿಗಳ ಆಯ್ಕೆ ಸಮಿತಿ