ಮಹಾಲಿಂಗವೆಂದುಂಟು. ಅದೆಂತಾದುದಯ್ಯಾ ಎಂದಡೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಹಾಲಿಂಗವೆಂದುಂಟು. ಅದೆಂತಾದುದಯ್ಯಾ ಎಂದಡೆ
ಸ್ವರಾಕ್ಷರ ವಿಕಲಾಕ್ಷರ ವ್ಯಾಪಕಾಕ್ಷರವೆಂದು ಮೂರುಪ್ರಕಾರ. ಸ್ವರಾಕ್ಷರವೆಲ್ಲ ನಾದಸಂಬಂಧ. ವಿಕಲಾಕ್ಷರವೆಲ್ಲ ಬಿಂದುಸಂಬಂಧ. ವ್ಯಾಪಕಾಕ್ಷರವೆಲ್ಲ ಕಳಾಸಂಬಂಧ. ನಾದವೇ ಆಕಾರ
ಬಿಂದುವೆ ಉಕಾರ
ಕಳೆಯೆ ಮಕಾರ. ಈ ನಾದ ಬಿಂದು ಕಳೆಗಳ ಗಬ್ರ್ಥೀಕರಿಸಿಕೊಂಡಿರ್ಪುದು ಚಿತ್ತು. ಆ ಚಿತ್ ಪ್ರಣಮಸ್ವರೂಪವೆ
ಅದ್ವೆ ೈತಾನಂದದಿಂದ ಸಂಪೂರ್ಣವನುಳ್ಳ ಆದಿಮಹಾಲಿಂಗವು
ಅನುಪಮಲಿಂಗವು
ಅನಾಮಯಲಿಂಗವು
ಅದ್ವಯಲಿಂಗವು
ಪರಮಲಿಂಗವು
ಪರಾಪರಲಿಂಗವು
ಪಿಂಡಾಂಡವನೊಳಕೊಂಡ ಅಖಂಡ ಲಿಂಗವು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.