ಮಾಟ ಮದುವೆಯ ಮನೆ. ದಾನಧರ್ಮ ಸಂತೆಯ ಪಸಾರ
ಸಾಜಸಾಜೇಶ್ವರಿ ಸೂಳೆಗೇರಿಯ ಸೊಬಗು. ವ್ರತನೇಮವೆಂಬುದು ವಂಚನೆಯ ಲುಬ್ಧವಾಣಿ. ಭಕ್ತಿಯೆಂಬುದು ಬಾಜಿಗಾರರಾಟ. ಬಸವಣ್ಣಗೆ ತರ ; ನಾನರಿಯದೆ ಹುಟ್ಟಿದೆ
ಹುಟ್ಟಿ ಹುಸಿಗೀಡಾದೆ. ಹುಸಿ ವಿಷಯದೊಳಡಗಿತ್ತು
ವಿಷಯ ಮಸಿಮಣ್ಣಾಯಿತ್ತು. ನಿನ್ನ ಗಸಣೆಯನೊಲ್ಲೆ ಹೋಗಾ
ಚೆನ್ನಮಲ್ಲಿಕಾರ್ಜುನಾ