ಮಾಡಿದ ಓಗರ ಮಾಡಿದಂತಿದ್ದಿತ್ತು,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮಾಡಿದ ಓಗರ ಮಾಡಿದಂತಿದ್ದಿತ್ತು
ನೀಡಿದ ಕೈಗಳೆಡೆಯಾಡುತ್ತಿರ್ದವು. ಲಿಂಗಕರ್ಪಿತವ ಮಾಡಿದೆವೆಂಬರು. ಒಂದರಲೊಂದು ಸವೆಯದು ನೋಡಾ. ಲಿಂಗವಾರೋಗಣೆಯ ಮಾಡಿದನೆಂಬರು
ತಾವುಂಡು ನಿಮ್ಮ ದೂರುವರು ಗುಹೇಶ್ವರಾ.