ಮಾಡುವ ನೀಡುವ ಭಕ್ತನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾಡುವ ನೀಡುವ ಭಕ್ತನ ಕಂಡಡೆ ನಿದ್ಥಿ ನಿಧಾನವ ಕಂಡಂತಾಯಿತ್ತು
ಪಾದೋದಕ ಪ್ರಸಾದಜೀವಿಯ ಕಂಡಡೆ ಹೋದ ಪ್ರಾಣ ಬಂದಂತಾಯಿತ್ತು. ಅನ್ಯರ ಮನೆಗೆ ಹೋಗಿ
ತನ್ನ ಉದರವ ಹೊರೆಯದ ಅಚ್ಚ ಶರಣರ ಕಂಡಡೆ ನಿಶ್ಚಯವಾಗಿ ಕೂಡಲಸಂಗಯ್ಯನೆಂಬೆನು.