ಮಾಡುವ ಭಕ್ತನಲ್ಲಿ ಕೂಡಿಪ್ಪ

ವಿಕಿಸೋರ್ಸ್ದಿಂದ



Pages   (key to Page Status)   


ಮಾಡುವ ಭಕ್ತನಲ್ಲಿ ಕೂಡಿಪ್ಪ ಜಂಗಮವು. ಖೋಡಿಗಳೆವುತ್ತಿಪ್ಪರು ಒಬ್ಬರನೊಬ್ಬರು
ತಮ್ಮವರ ತಾವರಿಯದಖಂಡಿತರು. ಒಡಲ ಗುಣಧರ್ಮದಿಂದ ಅನ್ನಾಸನ ಪಂಕ್ತಿಗೆ ಹೋರುವವರಿಗೇಕೆ ಶಿವನ ವೇಷ ? ಜಂಗಮವೆನಿಸಿಕೊಳ್ಳವೆ ಚರಾಚರವೆಲ್ಲವು ? ಅರಸನ ಹೆಸರಿನಲ್ಲಿ ಕರೆಯಿಸಿಕೊಂಡ ಅನಾಮಿಕನಂತೆ ನಾಮ ರೂಪ ಇರ್ದಡೇನಾಯಿತ್ತು ? ಅಲ್ಲಿ ಶಿವನಿಲ್ಲ ! ಎಲ್ಲಾ ಅವನಿಯಲ್ಲಿ ಹೇಮವಿಪ್ಪುದೆ ? ಇಪ್ಪುದೊಂದುಠಾವಿನಲ್ಲಿ. ಪರಮನ ವೇಷಕ್ಕೆ ತಕ್ಕ ಚರಿತ್ರವುಳ್ಳಲ್ಲಿ ಶಿವನಿಪ್ಪನು. ಅದೆಂತೆಂದಡೆ : `ಧಾರಯೇತ್ ಸಮತಾಕಂಥಾಂ ಕ್ಷಮಾಖ್ಯಾಂ ಭಸ್ಮಘುಟಿಕಾಂ ದಯಾ ಕಮಂಡಲಮೇವ ಜ್ಞಾನದಂಡೋ ಮನೋಹರಃ ಭಿಕ್ಷಾಪಾತ್ರಂ ಚ ವೈರಾಗ್ಯಭಕ್ತಿಭಿಕ್ಷಾಂ ಚ ಯಾಚಯೇತ್ ' ಎಂದುದಾಗಿ ಅರಿವಿನ ವೇಷವ ಜ್ಞಾನದಲ್ಲಿ ಧರಿಸಿ
ಕುರುಹಿನ ವೇಷವ ಅಂಗದಲ್ಲಿ ಧರಿಸಿ `ಭಕ್ತಿಭಿಕ್ಷಾಂದೇಹಿ' ಆದ ಅರಿವುಮೂರ್ತಿಗೆ ವೇಷವು ತಾ ಬೇಡ
ಗುಹೇಶ್ವರಲಿಂಗದ ಆಣತಿಯುಂಟಾಗಿ.