ಮಾಡುವ ಸದಾಚಾರಕ್ಕೆ ಮೊದಲನೆಯ
ಗೋಚರ
ಲೇಖಕರು: ChennaBasavanna
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಮಾಡುವ ಸದಾಚಾರಕ್ಕೆ ಮೊದಲನೆಯ ಲಿಂಗಪೂಜೆಯೆ ಗುರುಪೂಜೆ. ಮಾಡುವ ಸದಾಚಾರಕ್ಕೆ ಎರಡನೆಯ ಲಿಂಗಪೂಜೆಯೆ ಲಿಂಗಪೂಜೆ. ಮಾಡುವ ಸದಾಚಾರಕ್ಕೆ ಮೂರನೆಯ ಲಿಂಗಪೂಜೆಯೆ ಜಂಗಮಪೂಜೆ. ಮಾಡುವ ಸದಾಚಾರಕ್ಕೆ ಮೂರು ಪೂಜೆ. ಈ ಪೂಜೆ ಅನಂತಜನ್ಮದುರಿತಧ್ವಂಸಿ ನೋಡಾ
ಕೂಡಲಚೆನ್ನಸಂಗಮದೇವ ಸಾಕ್ಷಿಯಾಗಿ