ಮಾತಿನ ಮಾತಿಂಗೆ ನಿನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾತಿನ ಮಾತಿಂಗೆ ನಿನ್ನ ಕೊಂದಹರೆಂದು ಎಲೆ ಹೋತೇ ಅಳು
ಕಂಡಾ ! ವೇದವನೋದಿದವರ ಮುಂದೆ ಅಳು
ಕಂಡಾ ! ಶಾಸ್ತ್ರ ಕೇಳಿದವರ ಮುಂದೆ ಅಳು
ಕಂಡಾ ! ನೀನತ್ತುದಕ್ಕೆ ತಕ್ಕುದ ಮಾಡುವ ಕೂಡಲಸಂಗಮದೇವ.