ಮಾತೆಯಿಲ್ಲದ ಅಜಾತನು, ತಂದೆಯಿಲ್ಲದ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮಾತೆಯಿಲ್ಲದ ಅಜಾತನು
ತಂದೆಯಿಲ್ಲದ ಇಂದುಧರನು
ತಂದೆ ತಾಯಿ ಹೆಸರು ಕುಲವಿಲ್ಲದ ಪರಮನು. ಲಿಂಗದಲ್ಲಿ ಉದಯನಾದ ಚಿನುಮಯನು ನೋಡಾ
ಭಕ್ತನು. ನಿರ್ವಿಕಲ್ಪ ನಿರಂಜನನಾಗಿ ಮಾಯಾರಂಜನೆಯಿಲ್ಲದ ಮಹಾಮಹಿಮನು ನೋಡಾ
ಭಕ್ತನು. ಒಳಹೊರಗನರಿಯದ ಪರಿಪೂರ್ಣಸರ್ವಮಯವಾದ ಜಗಭರಿತನು
ಅದ್ವಯನು ನೋಡಾ ಭಕ್ತನು. ಇಂತಪ್ಪ ನಿರುಪಾಧಿಕ ಭಕ್ತನ
ನಿರ್ಗುಣ ಚರಿತ್ರವನೇನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.