ಮಾರಿ ಮಸಣಿಯೆಂಬವು ಬೇರಿಲ್ಲ ಕಾಣಿರೋ. ಮಾರಿಯೆಂಬುದೇನು ಕಂಗಳು ತಪ್ಪಿ ನೋಡಿದಡೆ ಮಾರಿ ನಾಲಗೆ ತಪ್ಪಿ ನುಡಿದಡೆ ಮಾರಿ ನಮ್ಮ ಕೂಡಲಸಂಗಮದೇವರ ನೆನಹ ಮರೆದಡೆ ಮಾರಿ.