ಮಿಥ್ಯವನಳಿದುಳಿದ ಸತ್ಯಪ್ರಸಾದಿ, ರಂಜನವಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಿಥ್ಯವನಳಿದುಳಿದ ಸತ್ಯಪ್ರಸಾದಿ
ರಂಜನವಿಲ್ಲದ ನಿರಂಜನ ಪ್ರಸಾದಿ
ದುಃಖವನಳಿದ ಘನಾನಂದಪ್ರಸಾದಿ
ಅನಿತ್ಯವಿಲ್ಲದ ನಿತ್ಯಪ್ರಸಾದಿ
ಖಂಡಿತವಿಲ್ಲದ ಅಖಂಡಿತಪ್ರಸಾದಿ
ಕೂಡಲಸಂಗಮದೇವರಲ್ಲಿ ತಾನೆ ಪ್ರಸಾದಿ.