ಮೀಂಬುಲಿಗನ ಹಕ್ಕಿಯಂತೆ ನೀರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮೀಂಬುಲಿಗನ ಹಕ್ಕಿಯಂತೆ ನೀರ ತಡಿಯಲಿದ್ದು ಮೂಗ ಹಿಡಿದು ಧ್ಯಾನಮಾಡುವರಯ್ಯಾ. ಬಿಟ್ಟ ಮಂಡೆವೆರಸಿ ಬಾಯ ಮಿಡುಕಿಸುತ ಕಣ್ಣ ಮುಚ್ಚಿ ಬೆರಳನೆಣಿಸುವರಯ್ಯಾ- [ತ]ಮ್ಮ ಕೈಯಲಿ ಕಟ್ಟಿದ ದರ್ಭೆಯ ಹುಲ್ಲು ಕೂಡಲಸಂಗನನರಿಯದೆ ಮೊರೆಯಿಡುವಂತೆ.